ನವದೆಹಲಿ: ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಕಳವಳಕಾರಿ ಪ್ರಮಾಣದಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 20,139 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ದೇಶಾದ್ಯಂತ ಈವರೆಗೆ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 4,36,89,989ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯಕ್ಕೆ ದೇಶದಲ್ಲಿ 1,36,076 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳ ಅವಧಿಯಲ್ಲಿ 3,619 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ನಿನ್ನೆ 16,482 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,30,28,356 ತಲುಪಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 5,25,557. ಪ್ರಸ್ತುತ ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ದರ ಶೇ. 98.49 ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇ. 5.10 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 4.37% ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 1,99,27,27,559 ಡೋಸ್ ಲಸಿಕೆಗಳನ್ನು ನೀಡಲಾಗಿದೆ. ಮತ್ತು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜುಲೈ 13 ರವರೆಗೆ 86.81 ಕೋಟಿ ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಬುಧವಾರ 3,94,774 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ 'ಮಹಾ' ಮಳೆಗೆ 89 ಮಂದಿ ಬಲಿ: ತೆಲಂಗಾಣದಲ್ಲೂ 10ಕ್ಕಿಂತ ಹೆಚ್ಚು ಜನ ಸಾವು