ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,777 ಮಂದಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,68,114 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲೀಗ 43,994 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 23 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,28,510 ಕ್ಕೆ ತಲುಪಿದೆ. ನಿನ್ನೆ 5,196 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,39,95,610 ಕ್ಕೆ ಏರಿಕೆಯಾಗಿದ್ದು, ಚೇತರಿಕೆಯ ಪ್ರಮಾಣ ಶೇ 98.72 ರಷ್ಟಿದೆ. ಸದ್ಯಕ್ಕೆ ದೈನಂದಿನ ಪಾಸಿಟಿವಿಟಿ ದರವು 1.63 % ಇದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ 1.58 ಇದೆ. ಸಾವಿನ ಪ್ರಮಾಣವು 1.19 % ಇದೆ.
ಇದನ್ನೂ ಓದಿ: ಕೋವಿಡ್ನಿಂದ ಚೇತರಿಸಿಕೊಂಡ ವರ್ಷದ ನಂತರವೂ ವಯಸ್ಸಾದವರಲ್ಲಿ ಅಲ್ಝೈಮರ್ ಅಪಾಯ ದ್ವಿಗುಣ: ಸಂಶೋಧನೆ
ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 2,17,56,67,942 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಕಳೆದೊಂದು ದಿನದಲ್ಲಿ 15,63,151 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,02,283 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 89,36,54,428 ತಲುಪಿದೆ.