ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 811 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಸದ್ಯ 13,559 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ ಮಹಾರಾಷ್ಟ್ರದಿಂದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಚೇತರಿಕೆಯ ಪ್ರಮಾಣ ಶೇ 98.78 ರಷ್ಟಿದೆ. ಸಾವಿನ ಪ್ರಮಾಣ ಶೇ 1.19 ರಷ್ಟಿದೆ. ರಾಷ್ಟ್ರವ್ಯಾಪಿ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 219.75 ಕೋಟಿ ಲಸಿಕಾ ಡೋಸ್ ನೀಡಲಾಗಿದೆ.
ಇದನ್ನೂ ಓದಿ: ಜ್ಞಾನ್ ನೇತ್ರಾ: ಮಂಕಿಪಾಕ್ಸ್ ಒಂದು ಕುತಂತ್ರಿ ವೈರಸ್