ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,685 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 4,31,50,215 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕಳೆದೊಂದು ದಿನದಲ್ಲಿ 33 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,572 ಜನ ಸಾವನ್ನಪ್ಪಿದ್ದಾರೆ. ಪ್ರಸ್ತುತ ಭಾರತದಲ್ಲಿ 16,308 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಕಳೆದ 24 ಗಂಟೆಗಳ ಅವಧಿಯಲ್ಲಿ 494 ಸಕ್ರಿಯ ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ.
ದೈನಂದಿನ ಪಾಸಿಟಿವಿಟಿ ದರ 0.60% ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.0.54 ರಷ್ಟಿದೆ. ಈವರೆಗೆ ಒಟ್ಟು 4,26,09,335 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ. 98.75 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಈವರೆಗೆ 193.13 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಗಗನಕ್ಕೇರಿದ ಟೊಮೆಟೋ ಬೆಲೆ.. ಉಳಿದ ತರಕಾರಿ, ಹಣ್ಣುಗಳ ಇಂದಿನ ದರ ಹೀಗಿದೆ..!