ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,487 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 43,121,599 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ. ಇದು ನಿನ್ನೆ ದಾಖಲಾದ ಪ್ರಕರಣಗಳಿಗಿಂತ ಸ್ವಲ್ಪ ಕಡಿಮೆಯಾಗಿದೆ.
ದೇಶಾದ್ಯಂತ ಕಳೆದೊಂದು ದಿನದಲ್ಲಿ 13 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,214 ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಪ್ರಮಾಣ ಶೇ. 1.22 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ. 0.61ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.62 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 17,692 ಸಕ್ರಿಯ ಪ್ರಕರಣಗಳಿವೆ. ನಿನ್ನೆ 2,878 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,79,693 ಮಂದಿ ಗುಣಮುಖರಾಗಿದ್ದಾರೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕಳೆದ 24 ಗಂಟೆಗಳಲ್ಲಿ 4,05,156 ಮಾದರಿಗಳನ್ನು ಕೋವಿಡ್‌ಗಾಗಿ ಪರೀಕ್ಷಿಸಲಾಗಿದೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ದೇಶಾದ್ಯಂತ ಒಟ್ಟು 84,38,36,914 ಮಾದರಿಗಳನ್ನು ಪರೀಕ್ಷಿಸಲಾಗಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 191.32 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ: ನ್ಯಾಯ ನಿರಾಕರಣೆ ಅಂತಿಮವಾಗಿ ಅರಾಜಕತೆಗೆ ದಾರಿ ಮಾಡಿಕೊಡಬಹುದು: ಸಿಜೆಐ ರಮಣ