ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,257 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿವೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 4,36,22,651 ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಿನ್ನೆ 42 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವಿನ ಸಂಖ್ಯೆ 5,25,428ಕ್ಕೇರಿದೆ.
ಕಳೆದೊಂದು ದಿನದಲ್ಲಿ 14,553 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,29,68,533 ಜನರು ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,28,690 ಸಕ್ರಿಯ ಪ್ರಕರಣಗಳಿವೆ.
ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ. 98.51 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ ಶೇ. 4.22 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 4.08 ಇದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 198.76 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ: ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ಗೆ ಕೋವಿಡ್ ದೃಢ