ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 20,528 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 4,37,50,599ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಿನ್ನೆ 49 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು ಸಾವಿನ ಸಂಖ್ಯೆ 5,25,709ಕ್ಕೆ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ 1,43,449 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 17,790 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,30,81,441ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ.1.20 ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ. 98.47 ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಶೇ. 4.44 ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.4.30ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 199.98 ಕೋಟಿ ಲಸಿಕೆ ನೀಡಲಾಗಿದೆ.
ಇದನ್ನೂ ಓದಿ: ಕೌಂಟ್‌ಡೌನ್! 2 ಬಿಲಿಯನ್ ವ್ಯಾಕ್ಸಿನ್ ಡೋಸ್ ವಿತರಣೆಯತ್ತ ಭಾರತ ಹೆಜ್ಜೆ