ETV Bharat / bharat

ಭಾರತದಲ್ಲಿ 9,531 ಹೊಸ ಕೋವಿಡ್ ಕೇಸ್​ ಪತ್ತೆ, 26 ಮಂದಿ ಸಾವು - ಕೋವಿಡ್​​

ದೇಶದಲ್ಲಿ ಕಳೆದೊಂದು ದಿನದಲ್ಲಿ ಪತ್ತೆಯಾದ ಕೋವಿಡ್​​ 19 ಪ್ರಕರಣಗಳ ವಿವರ ಹೀಗಿದೆ.

ಕೋವಿಡ್
covid 19
author img

By

Published : Aug 22, 2022, 11:26 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,531 ಹೊಸ ಕೋವಿಡ್‌ ಕೇಸ್​​​ಗಳು ದೃಢಪಟ್ಟಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,16,861ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದೊಂದು ದಿನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ 26 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ನಿನ್ನೆ ಮೃತಪಟ್ಟ 26 ಜನರ ಪೈಕಿ 10 ಸಾವುಗಳು ಕೇರಳದಲ್ಲಿ ವರದಿಯಾಗಿವೆ. ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಶೇ.98.59 ರಷ್ಟಿದ್ದರೆ, ಸಕ್ರಿಯ ಪ್ರಕರಣ ದರ ಶೇ. 0.22 ಇದೆ. ಸಾವಿನ ಪ್ರಮಾಣ ಶೇ.1.19 ರಷ್ಟಿದೆ. ದೈನಂದಿನ ಪಾಸಿಟಿವಿಟಿ ದರ 4.15% ಇದೆ.

ಇದನ್ನೂ ಓದಿ: ಕೋವಿಡ್​ ಟೆಸ್ಟ್​ಗೆ ಸ್ವ್ಯಾಬ್ ತೆಗೆದುಕೊಳ್ಳುವ ರೋಬೋಟ್ ಆವಿಷ್ಕಾರ

ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 210.02 ಕೋಟಿ ಲಸಿಕಾ ಡೋಸ್​ ನೀಡಲಾಗಿದೆ. ದೆಹಲಿಯಲ್ಲಿ ಭಾನುವಾರ 942 ಹೊಸ ಕೋವಿಡ್​ 19 ಪ್ರಕರಣಗಳು ದೃಢಪಟ್ಟಿವೆ. ಯಾವುದೇ ಹೊಸ ಸಾವು ವರದಿಯಾಗಿಲ್ಲ ಎಂದು ನಗರ ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಸೋಂಕಿತರಿಂದ ಹೆಚ್ಚುವರಿ ಹಣ ವಸೂಲಿ: 577 ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.