ETV Bharat / bharat

ದೇಶದಲ್ಲಿಂದು ತಗ್ಗಿದ ಕೋವಿಡ್‌​: 16,866 ಹೊಸ ಸೋಂಕಿತರು ಪತ್ತೆ, 41 ಮಂದಿ ಸಾವು - ತೆಲಂಗಾಣ ಮಂಕಿಪಾಕ್ಸ್ ಕೇಸ್​

ಭಾರತದಲ್ಲಿ ಕಳೆದೊಂದು ದಿನದಲ್ಲಿ ಕಂಡುಬಂದ ಕೋವಿಡ್ ಪ್ರಕರಣಗಳ ಮಾಹಿತಿ ಇಲ್ಲಿದೆ.

ಕೋವಿಡ್‌​
Covid
author img

By

Published : Jul 25, 2022, 10:18 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,866 ಹೊಸ ಕೋವಿಡ್‌ ಕೇಸ್​​​ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,39,05,621 ಕ್ಕೆ ಏರಿಕೆಯಾಗಿದೆ. ಭಾನುವಾರ ದಾಖಲಾದ ಕೇಸ್​ಗಳಿಗಿಂತ ಇಂದು 3,413 ಪ್ರಕರಣಗಳು ಕಡಿಮೆಯಾಗಿವೆ​ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದೊಂದು ದಿನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ 41 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈ ಮೂಲಕ ಮೃತಪಟ್ಟವರ ಒಟ್ಟು ಸಂಖ್ಯೆ 5,26,074ಕ್ಕೆ ತಲುಪಿದೆ. ಸದ್ಯಕ್ಕೆ ದೇಶದಲ್ಲಿ 1,50,877 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್​​ ಚೇತರಿಕೆ ದರ ಶೇ.98.46 ರಷ್ಟಿದ್ದರೆ, ಸಾವಿನ ದರ ಶೇ.1.20 ಇದೆ.

ನಿನ್ನೆ 18,148 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,32,28,670 ಕ್ಕೆ ತಲುಪಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 2,02,17,66,615 ಲಸಿಕಾ ಡೋಸ್​ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 16,82,390 ಡೋಸ್ ವ್ಯಾಕ್ಸಿನ್​ ನೀಡಲಾಗಿದ್ದು, 3,83,657 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ಗರಿಷ್ಠ ಪ್ರಕರಣಗಳು ದಾಖಲಾದ ಮೊದಲ 5 ರಾಜ್ಯಗಳು: ಕೇರಳದಲ್ಲಿ 2,021 ಪ್ರಕರಣಗಳು, ಮಹಾರಾಷ್ಟ್ರ 2,015, ತಮಿಳುನಾಡು 1,945, ಪಶ್ಚಿಮ ಬಂಗಾಳ 1,817 ಮತ್ತು ಕರ್ನಾಟಕದಲ್ಲಿ 1,151 ಪ್ರಕರಣಗಳು ದೃಢಪಟ್ಟಿವೆ.

ಮಂಕಿಪಾಕ್ಸ್ ಪ್ರಕರಣ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ. ಯಾವುದೇ ವಿದೇಶ ಪ್ರಯಾಣದ ಹಿನ್ನೆಲೆಯಿಲ್ಲದ 31 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ ಎಂದು ಲೋಕನಾಯಕ ಜೈ ಪ್ರಕಾಶ್ ನಾರಾಯಣ್ (ಎಲ್‌ಎನ್‌ಜೆಪಿ) ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಸುರೇಶ್ ಕುಮಾರ್ ಹೇಳಿದ್ದಾರೆ.

ತೆಲಂಗಾಣದ ಕಾಮರೆಡ್ಡಿ ಪಟ್ಟಣದ 40 ವರ್ಷದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ವೈರಸ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗಾಗಲೇ ಶಂಕಿತ ವ್ಯಕ್ತಿಯ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತೆಲಂಗಾಣದ ಸಾರ್ವಜನಿಕ ಆರೋಗ್ಯ ನಿರ್ದೇಶಕರು ತಿಳಿಸಿದ್ದಾರೆ.

ದೇಶದಲ್ಲಿ ಮಂಕಿಪಾಕ್ಸ್ ವೈರಸ್‌ನ ಮೊದಲ ಪ್ರಕರಣ ಕೇರಳದಲ್ಲಿ ವರದಿಯಾಗಿತ್ತು. ಜು.14 ರಂದು ಮೊದಲ ಪ್ರಕರಣ ತಿರುವನಂತಪುರಂನಲ್ಲಿ ಪತ್ತೆಯಾಗಿತ್ತು. ಬಳಿಕ ಜು.18 ರಂದು ಕೇರಳದ ಕಣ್ಣೂರು ಜಿಲ್ಲೆಯಲ್ಲಿ 2ನೇ ಪ್ರಕರಣ, ಜು. 22 ರಂದು ಮಲಪ್ಪುರಂ ಜಿಲ್ಲೆಯಲ್ಲಿ 3ನೇ ಪ್ರಕರಣ ವರದಿಯಾಗಿದೆ.

ಚೀನಾ ಕೋವಿಡ್​ ವರದಿ: ಚೀನಾದಲ್ಲಿ ಜುಲೈ 24 ರಂದು 800 ಹೊಸ ಕೊರೊನಾವೈರಸ್ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 150 ಮಂದಿಗೆ ರೋಗ ಲಕ್ಷಣಗಳಿದ್ದು, 650 ಮಂದಿಗೆ ಲಕ್ಷಣಗಳಿಲ್ಲ ಎಂದು ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.