ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಪ್ರಕರಣ ಮತ್ತೆ ಏರಿಕೆಯತ್ತ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 41,965 ಜನರಿಗೆ ಕೋವಿಡ್ ವೈರಸ್ ದೃಢಪಟ್ಟಿದೆ. ಈ ಅವಧಿಯಲ್ಲಿ 460 ಜನ ವೈರಸ್‌ಗೆ ಬಲಿಯಾಗಿದ್ದಾರೆ. ಈವರೆಗೆ ಒಟ್ಟಾರೆ 4,39,020 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದೊಂದು ದಿನದಲ್ಲಿ ಸೋಂಕಿನಿಂದ 33,964 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,19,93,644 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,78,181ಕ್ಕೆ ಏರಿಕೆಯಾಗಿದೆ.
ಒಂದೇ ದಿನ 1.33 ಕೋಟಿ ಮಂದಿಗೆ ಲಸಿಕೆ
ಮಂಗಳವಾರ ದಾಖಲೆಯ 1,33,18,718 ಮಂದಿಗೆ ಲಸಿಕೆ ನೀಡಲಾಗಿದ್ದು, ಈವರೆಗೆ ಒಟ್ಟು 65,41,13,508 ಜನ ವ್ಯಾಕ್ಸಿನ್ ಪಡೆದಿದ್ದಾರೆ. 52,31,84,293 ಜನರಿಗೆ ಕೋವಿಡ್ ಪರೀಕ್ಷೆಗಳನ್ನು ಮಾಡಲಾಗಿದ್ದು, ಒಂದೇ ದಿನ 16,06,785 ಮಂದಿಯನ್ನು ಕೊರೊನಾ ಟೆಸ್ಟ್‌ಗೆ ಒಳಪಡಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.
- " class="align-text-top noRightClick twitterSection" data="">
ದೇಶದಲ್ಲಿ ದಾಖಲಾಗುತ್ತಿರುವ ಪ್ರಕರಣಗಳ ಪೈಕಿ ಅರ್ಧದಷ್ಟು ಕೇಸ್‌ಗಳು ಕೇರಳದಲ್ಲೇ ದಾಖಲಾಗುತ್ತಿರುವುದು ಕೇಂದ್ರ ಆರೋಗ್ಯ ಸಚಿವಾಲಯದ ಕಳವಳಕ್ಕೆ ಕಾರಣವಾಗಿದೆ.