ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 14,830 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,39,20,451ಕ್ಕೆ ಏರಿಕೆಯಾಗಿದೆ. ಸೋಮವಾರ ದಾಖಲಾದ ಕೇಸ್ಗಳಿಗಿಂತ ಇಂದು 3,365 ಪ್ರಕರಣಗಳು ಕಡಿಮೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ನಿನ್ನೆ 36 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಮೃತರ ಸಂಖ್ಯೆ 5,26,110ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 18,159 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,32,46,829 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,47,512 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ. 98.47 ರಷ್ಟಿದ್ದರೆ, ದೈನಂದಿನ ಪಾಸಿಟಿವಿಟಿ ದರ ಶೇ.3.48 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 202.50 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ICMR ಪರೀಕ್ಷೆ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜು.25 ರವರೆಗೆ ಕೋವಿಡ್-19ಗಾಗಿ 87,31,85,917 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಸೋಮವಾರ 4,26,102 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಇದನ್ನೂ ಓದಿ: ದೇಶದಲ್ಲಿಂದು ತಗ್ಗಿದ ಕೋವಿಡ್: 16,866 ಹೊಸ ಸೋಂಕಿತರು ಪತ್ತೆ, 41 ಮಂದಿ ಸಾವು