ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,226 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 65 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಇಲ್ಲಿಯವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,24,413 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಪ್ರಸ್ತುತ ದೇಶಾದ್ಯಂತ 14,955 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಕಳೆದ 24 ಗಂಟೆಗಳ ಅವಧಿಯಲ್ಲಿ 41 ಸಕ್ರಿಯ ಪ್ರಕರಣಗಳು ಇಳಿಕೆಯಾಗಿವೆ. ನಿನ್ನೆ 2,202 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,97,003 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ. 98.75 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಈವರೆಗೆ 1,92,28,66,524 ಲಸಿಕಾ ಡೋಸ್‌ಗಳನ್ನು ನೀಡಲಾಗಿದ್ದು, ಕಳೆದೊಂದು ದಿನದಲ್ಲಿ 14,37,381 ಡೋಸ್ ನೀಡಲಾಗಿದೆ.
-
COVID19 | India reports 2,226 fresh cases today; Active caseload at 14,955 pic.twitter.com/ODtD2ZDNk1
— ANI (@ANI) May 22, 2022 " class="align-text-top noRightClick twitterSection" data="
">COVID19 | India reports 2,226 fresh cases today; Active caseload at 14,955 pic.twitter.com/ODtD2ZDNk1
— ANI (@ANI) May 22, 2022COVID19 | India reports 2,226 fresh cases today; Active caseload at 14,955 pic.twitter.com/ODtD2ZDNk1
— ANI (@ANI) May 22, 2022
ಮಧ್ಯಪ್ರದೇಶದಲ್ಲಿ ಕಳೆದೊಂದು ದಿನದಲ್ಲಿ 43 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಕೋವಿಡ್ -19 ಸೋಂಕಿತರ ಸಂಖ್ಯೆ 10,42,167 ಕ್ಕೆ ತಲುಪಿದೆ. ರಾಜ್ಯದಲ್ಲಿ 262 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ ಯಾವುದೇ ಸಾವು ವರದಿಯಾಗಿಲ್ಲ. ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 0.6 ರಿಂದ ಶೇಕಡಾ 0.5 ಕ್ಕೆ ಇಳಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಹಾಗೆಯೇ, ಗುಜರಾತ್ನಲ್ಲಿ ನಿನ್ನೆ 28 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 12,24,893 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ದಿನಕ್ಕೆ 500 ಪುಷ್ ಅಪ್ಸ್, 1,200 ಕೆಜಿ ಕಲ್ಲು ಎತ್ತಿದ ಭಾರತದ ಪರಾಕ್ರಮಿಗೆ ಗೂಗಲ್ ಡೂಡಲ್ ಗೌರವ