ETV Bharat / bharat

24 ಗಂಟೆಗಳಲ್ಲಿ 7,974 ಕೋವಿಡ್ ಸೋಂಕಿತರು ಪತ್ತೆ.. ಒಮಿಕ್ರಾನ್ ಕೇಸ್​ಗಳ ಸಂಖ್ಯೆ 57ಕ್ಕೆ ಏರಿಕೆ - ಭಾರತ ಕೊರೊನಾ ವರದಿ

India Covid Report: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,974 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, ಅತಿ ಹೆಚ್ಚು ಒಮಿಕ್ರಾನ್​ ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿವೆ. ಈ ಹಿನ್ನೆಲೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಹೊಸ ವರ್ಷದವರೆಗೆ ಮುಂಬೈನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

India covid
India covid
author img

By

Published : Dec 16, 2021, 10:56 AM IST

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,974 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 343 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಸದ್ಯಕ್ಕೆ ಒಟ್ಟು 87,245 ಸಕ್ರಿಯ ಪ್ರಕರಣಗಳಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು, ಶೇಕಡಾ ದರ 0.25 ರಷ್ಟಿದೆ. ಜೊತೆಗೆ ನಿನ್ನೆ 343 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,76,478 ಕ್ಕೆ ಏರಿಕೆಯಾಗಿದೆ.

ಕಳೆದ ಒಂದುವರೆ ತಿಂಗಳಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡು ಬರುತ್ತಿವೆ. ಕೇರಳದಲ್ಲಿ ಕಳೆದ 24 ಗಂಟೆಗಳಲ್ಲಿ 125 ಮಂದಿ ಸೋಂಕಿತರು ಸಾವನ್ನಪ್ಪಿದ್ದು, 4,006 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಮಹಾರಾಷ್ಟ್ರದಲ್ಲಿ 925 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 317 ಹೊಸ ಪ್ರಕರಣಗಳು ಕಂಡುಬಂದಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ.

ಕಳೆದ 24 ಗಂಟೆಗಳಲ್ಲಿ 7,948 ಜನರು ವೈರಸ್‌ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಚೇತರಿಕೆ ಪ್ರಮಾಣ ಶೇ. 98.38 ಇದೆ. ಈವರೆಗೆ ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 3,41,54,879 ಕ್ಕೆ ಏರಿಕೆಯಾಗಿದೆ.

ಜನವರಿ 16 ರಿಂದ ದೇಶಾದ್ಯಂತ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 1,35,25,36,986 ಕ್ಕೂ ಅಧಿಕ ಡೋಸ್ ವ್ಯಾಕ್ಸಿನ್​ ನೀಡಲಾಗಿದೆ.

Omicron cases in India:

ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಆತಂಕ ಮೂಡಿಸಿದೆ. ಅತಿ ಹೆಚ್ಚು ಒಮಿಕ್ರಾನ್​ ಪ್ರಕರಣಗಳು ಮಹಾರಾಷ್ಟ್ರದಲ್ಲಿ ವರದಿಯಾಗಿದ್ದು, ಈವರೆಗೆ ಬರೋಬ್ಬರಿ 32 ಸೋಂಕಿತರು ಪತ್ತೆಯಾಗಿದ್ದಾರೆ. ಈ ಹಿನ್ನೆಲೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಹೊಸ ವರ್ಷದವರೆಗೆ ಮುಂಬೈನಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

  • Maharashtra: Security tightened after section 144 CrPC imposed in Mumbai up to midnight on New Year's eve, in wake of #Omicron cases in the state

    "Will take action if Covid appropriate behaviour will not be followed by people," said MIDC police inspector Nasir Kulkarni pic.twitter.com/ksAUr1LNoM

    — ANI (@ANI) December 15, 2021 " class="align-text-top noRightClick twitterSection" data=" ">

ಈಗಾಗಲೇ ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಕರ್ನಾಟಕ, ಕೇರಳ, ನವದೆಹಲಿ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ ಈವರೆಗೆ ಒಟ್ಟು 57 ಒಮಿಕ್ರಾನ್ ಕೇಸ್​ಗಳು ಪತ್ತೆಯಾಗಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.