ETV Bharat / bharat

ದೇಶದಲ್ಲಿ ಕೊರೊನಾ ಸೋಂಕಿತರಿಗಿಂತ ಚೇತರಿಸಿಕೊಂಡವರೇ ಹೆಚ್ಚು: 113ಕ್ಕೇರಿದ ಒಮಿಕ್ರಾನ್ ಕೇಸ್​ಗಳು - ಕೋವಿಡ್​ ವೈರಸ್ ಕೇಸ್​

India Covid Report : ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,145 ಮಂದಿ ಹೊಸ ಕೋವಿಡ್-19​​ ಸೋಂಕಿತರು ಪತ್ತೆಯಾಗಿದ್ದು, ಭಾರತದಲ್ಲಿ ಒಮಿಕ್ರಾನ್​ ಸೋಂಕಿತರ ಸಂಖ್ಯೆ113ಕ್ಕೆ ಏರಿಕೆಯಾಗಿದೆ.

India COVID daily update
India COVID daily update
author img

By

Published : Dec 18, 2021, 11:32 AM IST

ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 7,145 ಮಂದಿ ಹೊಸ ಕೋವಿಡ್​​ ಸೋಂಕಿತರು ಪತ್ತೆಯಾಗಿದ್ದು, 289 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ದೇಶದಲ್ಲಿ ಸದ್ಯಕ್ಕೆ ಒಟ್ಟು 84,565 ಸಕ್ರಿಯ ಪ್ರಕರಣಗಳಿವೆ. ಕಳೆದ 569 ದಿನಗಳಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಶೇಕಡಾ ದರ 0.25 ರಷ್ಟಿದೆ. ಜೊತೆಗೆ ನಿನ್ನೆ 289 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಸಾವಿನ ಸಂಖ್ಯೆ 4,77,158 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ಬರೋಬ್ಬರಿ 8,706 ಮಂದಿ ಕೊರೊನಾದಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,41,71,471 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.38 ರಷ್ಟಿದೆ.

ಕಳೆದ 51 ದಿನಗಳಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 0.57 ರಷ್ಟಿದೆ. ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದ್ದು, ಇದುವರೆಗೆ 136.66 ಕೋಟಿಗೂ ಅಧಿಕ ಲಸಿಕಾ ಡೋಸ್‌ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Omicron cases in India : ದೇಶದಲ್ಲಿ ಕೋವಿಡ್​ ರೂಪಾಂತರಿ ತಳಿ ಒಮಿಕ್ರಾನ್​ ಆತಂಕ ಮೂಡಿಸಿದೆ. ಈಗಾಗಲೇ ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್‌, ಕರ್ನಾಟಕ, ಕೇರಳ, ನವದೆಹಲಿ, ಆಂಧ್ರಪ್ರದೇಶ, ತೆಲಂಗಾಣದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣ ದೃಢಪಟ್ಟಿವೆ. ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಕೇವಲ 15 ದಿನಗಳಲ್ಲೇ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ಶುಕ್ರವಾರ ದೇಶದಲ್ಲಿ 26 ಹೊಸ ಒಮಿಕ್ರಾನ್ ಕೇಸ್​ಗಳು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 113ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.