ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 21,411 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ 5,25,428ಕ್ಕೆ ಏರಿಕೆಯಾಗಿದೆ. 67 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಸದ್ಯಕ್ಕೆ ದೇಶದಲ್ಲಿ 1,50,100 ಸಕ್ರಿಯ ಪ್ರಕರಣಗಳಿವೆ. 24 ಗಂಟೆಗಳ ಅವಧಿಯಲ್ಲಿ 618 ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ನಿನ್ನೆ ದೇಶಾದ್ಯಂತ 20726 ಮಂದಿ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,31,92,379 ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ. 1.20 ರಷ್ಟಿದ್ದರೆ, ಚೇತರಿಕೆ ದರ ಶೇ. 98.46 ರಷ್ಟಿದೆ.
ದೈನಂದಿನ ಪಾಸಿಟಿವಿಟಿ ದರ ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 4.46 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಈವರೆಗೆ 201.68 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ. ಶುಕ್ರವಾರ 34,93, 209 ಡೋಸ್ ಲಸಿಕೆ ನೀಡಲಾಗಿದೆ.
ಕಳೆದೊಂದು ದಿನದಲ್ಲಿ 67 ಮಂದಿ ಮೃತಪಟ್ಟಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 5,25,997 ಕ್ಕೆ ಏರಿಕೆಯಾಗಿದೆ. ನಿನ್ನೆ ಮೃತಪಟ್ಟ 67 ಮಂದಿ ಪೈಕಿ, ಕೇರಳದಿಂದ 32, ಪಶ್ಚಿಮ ಬಂಗಾಳ 7, ಮಹಾರಾಷ್ಟ್ರ 6, ಗುಜರಾತ್ ಮತ್ತು ಉತ್ತರ ಪ್ರದೇಶದಿಂದ ತಲಾ ಮೂವರು, ಅಸ್ಸೋಂ, ಬಿಹಾರ, ಜಾರ್ಖಂಡ್ ಮತ್ತು ಮೇಘಾಲಯದಿಂದ ತಲಾ ಇಬ್ಬರು ಮತ್ತು ಛತ್ತೀಸ್‌ಗಢ, ದೆಹಲಿ, ಗೋವಾ, ಮಧ್ಯಪ್ರದೇಶ, ಮಿಜೋರಾಂ, ಪುದುಚೇರಿ, ಸಿಕ್ಕೀಂ ಮತ್ತು ತಮಿಳುನಾಡಿನಲ್ಲಿ ತಲಾ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವದ ಪಾತ್ರ ವಹಿಸಿದೆ: ಸಿಎಂ ಬೊಮ್ಮಾಯಿ