ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 28,326 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 26,032 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ 3,29,02,351 ಜನ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಸದ್ಯ ದೇಶದಲ್ಲಿ 3,03,476 ಸಕ್ರಿಯ ಪ್ರಕರಣಗಳಿವೆ. ಶನಿವಾರ ವೈರಸ್ಗೆ 260 ಮಂದಿ ಬಲಿಯಾಗಿದ್ದು, ಈವರೆಗೆ 4,46,918 ಜನರು ಮೃತಪಟ್ಟಿದ್ದಾರೆ.
ಸೆಪ್ಟೆಂಬರ್ 25 ರಂದು 68,42,786 ವ್ಯಾಕ್ಸಿನ್ ಡೋಸ್ಗಳನ್ನು ಹಾಕಲಾಗಿದ್ದು, ಒಟ್ಟಾರೆ 85,60,81,527 ಲಸಿಕಾ ಡೋಸ್ಗಳನ್ನು ನೀಡಲಾಗಿದೆ.
ನಿನ್ನೆ 14,88,945 ಗಂಟಲು ದ್ರವ ಮಾದರಿಗಳನ್ನು ಟೆಸ್ಟ್ ಮಾಡಲಾಗಿದ್ದು, ಈವರೆಗೆ 56,32,43,245 ಸ್ವ್ಯಾಬ್ ಪರೀಕ್ಷೆ ಮಾಡಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ICMR) ತಿಳಿಸಿದೆ.