ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 7,350 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು 202 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯಕ್ಕೆ ದೇಶದಲ್ಲಿ 91,456 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಕಳೆದ 561 ದಿನಗಳಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ನಿನ್ನೆ ಬರೋಬ್ಬರಿ 7,973 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,41,30,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.37% ರಷ್ಟಿದೆ.
![ಕೊರೊನಾ ವರದಿ](https://etvbharatimages.akamaized.net/etvbharat/prod-images/13890563_tasas.jpg)
ಕಳೆದ 46 ದಿನಗಳಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 0.86%ರಷ್ಟಿದೆ.
ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 56 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಕೇರಳದಲ್ಲಿ- 3,777, ಚತ್ತೀಸ್‌ಗಢದಲ್ಲಿ- 25, ಮುಂಬೈನಲ್ಲಿ- 187 ಹೊಸ ಪ್ರಕರಣಗಳು ದೃಢಪಟ್ಟಿವೆ.
ದೇಶದಲ್ಲಿ ಕೋವಿಡ್ ರೂಪಾಂತರಿ ತಳಿ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದೆ. ಇದುವರೆಗೆ 1,3,3,17,84,462 ಕೋಟಿಗೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈಗಾಗಲೇ ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಕರ್ನಾಟಕ, ಕೇರಳ, ನವದೆಹಲಿ, ಆಂಧ್ರಪ್ರದೇಶ, ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಆಯಾ ರಾಜ್ಯ ಸರ್ಕಾರಗಳು ಮುಂಜಾಗ್ರತಾ ಕ್ರಮ ಕೈಗೊಂಡಿವೆ.