ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕು ಭಾರಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 861 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,30,36,132 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 6 ಮಂದಿ ಸಾವನ್ನಪ್ಪಿದ್ದಾರೆ.
ಈ ಮೂಲಕ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,21,691 ಕ್ಕೆ ಏರಿಕೆಯಾಗಿದೆ. ನಿನ್ನೆ 929 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆ ದರ ಶೇ. 98.76 ರಷ್ಟಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 4,25,03,383 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯಕ್ಕೆ 11,058 (0.03%) ಸಕ್ರಿಯ ಪ್ರಕರಣಗಳಿವೆ. ಲಸಿಕೆ ನೀಡುವ ಕಾರ್ಯ ಸಹ ಮುಂದುವರೆದಿದೆ. ರಾಷ್ಟ್ರವ್ಯಾಪಿ ಇದುವರೆಗೆ ಒಟ್ಟು 1,85,74,18,827 ಲಸಿಕಾ ಡೋಸ್ ನೀಡಲಾಗಿದೆ.
ಭಾರತದ ಕೋವಿಡ್-19 ಸೋಂಕಿತರ ಸಂಖ್ಯೆ ಆಗಸ್ಟ್ 7, 2020 ರಂದು 20 ಲಕ್ಷದ ಗಡಿ ದಾಟಿತ್ತು. ಆಗಸ್ಟ್ 23 ರಂದು 30 ಲಕ್ಷ, ಸೆಪ್ಟೆಂಬರ್ 5 ರಂದು 40 ಲಕ್ಷ ಮತ್ತು ಸೆಪ್ಟೆಂಬರ್ 16 ರಂದು 50 ಲಕ್ಷ. ಇದು ಸೆಪ್ಟೆಂಬರ್ 28 ರಂದು 60 ಲಕ್ಷ, ಅಕ್ಟೋಬರ್ 11 ರಂದು 70 ಲಕ್ಷ ದಾಟಿದೆ. ಅಕ್ಟೋಬರ್ 29 ರಂದು 80 ಲಕ್ಷ, ನವೆಂಬರ್ 20 ರಂದು 90 ಲಕ್ಷ ಮತ್ತು ಡಿಸೆಂಬರ್ 19 ರಂದು ಒಂದು ಕೋಟಿ ಗಡಿ ದಾಟಿದೆ.
ಇದನ್ನೂ ಓದಿ: ಭಯೋತ್ಪಾದನಗೆ ಸಂಚು ರೂಪಿಸುತ್ತಿರುವ ABT, AQIS.. ಅಸ್ಸೋಂನ 11 ಕಡೆಗಳಲ್ಲಿ ಎನ್ಐಎ ಶೋಧ