ನವದೆಹಲಿ: ದೇಶದಲ್ಲಿ ಕಳೆದೊಂದು ದಿನದಲ್ಲಿ 2,706 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,55,749ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ. ದೇಶಾದ್ಯಂತ ಕಳೆದೊಂದು ದಿನದಲ್ಲಿ 25 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,611 ಮಂದಿ ಸಾವನ್ನಪ್ಪಿದ್ದಾರೆ.
-
India records 2,706 new COVID19 cases today; Active cases stand at 17,698 pic.twitter.com/xF4GxC6yoP
— ANI (@ANI) May 30, 2022 " class="align-text-top noRightClick twitterSection" data="
">India records 2,706 new COVID19 cases today; Active cases stand at 17,698 pic.twitter.com/xF4GxC6yoP
— ANI (@ANI) May 30, 2022India records 2,706 new COVID19 cases today; Active cases stand at 17,698 pic.twitter.com/xF4GxC6yoP
— ANI (@ANI) May 30, 2022
ದೈನಂದಿನ ಪಾಸಿಟಿವಿಟಿ ದರ ಶೇ.0.97 ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 0.58 ರಷ್ಟಿದೆ. ಚೇತರಿಕೆಯ ಪ್ರಮಾಣ ಶೇ. 98.74. ಸದ್ಯ ದೇಶದಲ್ಲಿ 17,698 ಸಕ್ರಿಯ ಪ್ರಕರಣಗಳಿವೆ. ನಿನ್ನೆ(ಭಾನುವಾರ) 2,070 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,26,13,440 ಮಂದಿ ಗುಣಮುಖರಾಗಿದ್ದಾರೆ. ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ 193.31 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಕೋವಿಡ್-19ಗಾಗಿ ಮೇ 29 ರವರೆಗೆ 85,00,77,409 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ 2,78,267 ಮಾದರಿಗಳನ್ನು ಭಾನುವಾರ ಪರೀಕ್ಷಿಸಲಾಗಿದೆ.
ಇದನ್ನೂ ಓದಿ: ಭಾರತದ ಕೋವಿಡ್ ಲಸಿಕಾ ಅಭಿಯಾನವನ್ನು ಶ್ಲಾಘಿಸಿದ ಬಿಲ್ ಗೇಟ್ಸ್