ನವದೆಹಲಿ: ದೇಶದಲ್ಲಿ ಹೊಸದಾಗಿ 46,164 ಜನರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಇದೇ ಅವಧಿಯಲ್ಲಿ 607 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಮಾರಕ ರೋಗದಿಂದ ಪ್ರಾಣ ಕಳೆದುಕೊಂಡವರ ಸಂಖ್ಯೆ 4,36,365ರ ಗಡಿ ದಾಟಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಕಳೆದೊಂದು ದಿನದಲ್ಲಿ 34,159 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಚೇತರಿಸಿಕೊಂಡವರ ಸಂಖ್ಯೆ 3,17,88,440 ಆಗಿದೆ. ಸಕ್ರಿಯ ಪ್ರಕರಣಗಳು 3,33,725ರಷ್ಟಿವೆ. ನಿನ್ನೆ ಕಂಡುಬಂದ ಕೋವಿಡ್ ಪ್ರಕರಣಗಳ ಬಗೆಗಿನ ಮಾಹಿತಿಗೆ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.
ಇದನ್ನೂ ಓದಿ: ದೇಶದಲ್ಲಿ ಹೊಸದಾಗಿ 37,593 ಮಂದಿಗೆ ಕೋವಿಡ್ ದೃಢ: 648 ಜನ ಸಾವು
ಭಾರತದಲ್ಲಿ ಈವರೆಗೆ 60,38,46,475 ಮಂದಿಗೆ ಲಸಿಕೆ ನೀಡಲಾಗಿದೆ. ನಿನ್ನೆ ಒಂದೇ ದಿನ 80,40,407 ಜನರಿಗೆ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇಡೀ ದೇಶದ ಅರ್ಧಕ್ಕಿಂತ ಹೆಚ್ಚಿನ ಪ್ರಕರಣಗಳು ನೆರೆಯ ಕೇರಳ ರಾಜ್ಯದಲ್ಲೇ ಪತ್ತೆಯಾಗುತ್ತಿವೆ. ಈ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದ್ದು, ತಜ್ಞರ ತಂಡವನ್ನು ಅಲ್ಲಿಗೆ ಕಳುಹಿಸಿಕೊಟ್ಟಿದೆ.