ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 34,403 ಮಂದಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 320 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ವರದಿಯಾದ ಹೊಸ ಕೇಸ್ಗಳ ಪೈಕಿ ಕೇರಳ ರಾಜ್ಯದಲ್ಲೇ 22,182 ಪ್ರಕರಣಗಳು ಕಂಡು ಬಂದಿವೆ. ಕೇರಳ ಬಳಿಕ ಮಿಜೋರಾಂ, ಕರ್ನಾಟಕ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸಾವು - ನೋವಿನ ಪ್ರಮಾಣ ಹೆಚ್ಚುತ್ತಿದೆ.
ಇದೀಗ ದೇಶದಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3,33,81,728ಕ್ಕೆ ಹಾಗೂ ಸಾವಿನ ಸಂಖ್ಯೆ 4,44,248 ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಪೈಕಿ ಶೇ.97.65 ರಷ್ಟು ಅಂದರೆ 3,25,98,424 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಶೇ.1.02 ರಷ್ಟು (3,39,056) ಕೇಸ್ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: ಲಸಿಕೆ ನಂತರವೂ 23 ಸಾವಿರ ಮಂದಿಗೆ ತಗುಲಿದ ಕೊರೊನಾ!
77.24 ಕೋಟಿ ಡೋಸ್ ವ್ಯಾಕ್ಸಿನೇಷನ್
ಜನವರಿ 16ರಿಂದ ದೇಶಾದ್ಯಂತ ಕೊರೊನಾ ಲಸಿಕಾಭಿಯಾನ ಆರಂಭಿಸಲಾಗಿದ್ದು, ಈವರೆಗೆ 77,24,25,744 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24 ಗಂಟೆಗಳ 63,97,972 ಜನರು ಲಸಿಕೆ ಪಡೆದಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಜನ್ಮದಿನ ಹಿನ್ನೆಲೆ ದಾಖಲೆ ಮಟ್ಟದಲ್ಲಿ ವ್ಯಾಕ್ಸಿನೇಷನ್ ಕೈಗೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ.