ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಶನಿವಾರಕ್ಕಿಂತ 9,550 ಕಡಿಮೆ ಸೋಂಕಿತರು ಕಂಡುಬಂದಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 488 ಮಂದಿ ಕೋವಿಡ್ಗೆ ಬಲಿಯಾಗಿದ್ದು, 2,42,676 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ದಿನವೊಂದರಲ್ಲಿ ಸೋಂಕು ಪರೀಕ್ಷೆ ಮಾಡಿಸಿಕೊಳ್ಳುವವರ ಪೈಕಿ ಸುಮಾರು ಶೇಕಡಾ 17.22ರಷ್ಟು ಮಂದಿಯಲ್ಲಿ ಸೋಂಕು ಕಂಡುಬರುತ್ತಿದೆ.
ಈವರೆಗೆ ಒಟ್ಟು 3,65,60,650 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಗುಣಮುಖರಾಗಿರುವವರ ಪ್ರಮಾಣ ಶೇಕಡಾ 93.18ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ.ಈವರೆಗೆ ದೇಶದಲ್ಲಿ ಸುಮಾರು 4,89,409 ಮಂದಿ ಮೃತಪಟ್ಟಿದ್ದಾರೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 71,55,20,580 ಕೋಟಿ ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಶನಿವಾರ ಒಂದೇ ದಿನ 18,75,533 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,61,92,84,270 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಶನಿವಾರ ಒಂದೇ ದಿನದಲ್ಲಿ 71,10,445 ಮಂದಿಗೆ ಲಸಿಕೆ ನೀಡಲಾಗಿದೆ.
ಒಮಿಕ್ರಾನ್ ಸೋಂಕು: ದೇಶದಲ್ಲಿ ಈವರೆಗೆ 10,050 ಮಂದಿಯಲ್ಲಿ ಒಮಿಕ್ರಾನ್ ಸೋಂಕು ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ