ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 44,877 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಭಾನುವಾರ ತಿಳಿಸಿದೆ.
ಇದೇ ಅವಧಿಯಲ್ಲಿ 684 ಜನರು ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,08,665ಕ್ಕೆ ಏರಿದೆ. ಪ್ರಸ್ತುತ ದೇಶದಲ್ಲಿ 5,37,045 ಸಕ್ರಿಯ ಪ್ರಕರಣಗಳಿವೆ. ಭಾರತದಲ್ಲಿ ದೈನಂದಿನ ಪಾಸಿಟಿವಿಟಿ ದರವು ಶೇ. 3.17 ರಷ್ಟು ಮತ್ತು ಸಾಪ್ತಾಹಿಕ ಪಾಸಿಟಿವಿಟಿ ದರ ಶೇ. 4.46 ರಷ್ಟಿದೆ.
ನಿನ್ನೆ ಒಟ್ಟು 1,17,591 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಚೇತರಿಸಿಕೊಂಡವರ ಸಂಖ್ಯೆ 4,15,85,711 ಆಗಿದೆ. ಚೇತರಿಕೆಯ ಪ್ರಮಾಣ ಶೇ.97.55 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ 14,15,279 ಪರೀಕ್ಷೆಗಳನ್ನು ಒಳಗೊಂಡಂತೆ ಇದುವರೆಗೆ ಒಟ್ಟು 750 ಮಿಲಿಯನ್ ಪರೀಕ್ಷೆಗಳನ್ನು ನಡೆಸಲಾಗಿದೆ. ಶನಿವಾರ 46.82 ಲಕ್ಷ ಡೋಸ್ ವ್ಯಾಕ್ಸಿನ್ ನೀಡಲಾಗಿದ್ದು, ದೇಶದ ಕೋವಿಡ್-19 ವ್ಯಾಕ್ಸಿನೇಷನ್ ಕವರೇಜ್ 172.29 ಕೋಟಿಗಳನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕೋವಿಡ್ 3ನೇ ಅಲೆಯ ಸಮಯದಲ್ಲಿ ಮೊದಲ ಬಾರಿಗೆ ಮುಂಬೈನಲ್ಲಿ ಪಾಸಿಟಿವಿಟಿ ದರ ಶೇ. 1 ಕ್ಕಿಂತ ಕಡಿಮೆ ವರದಿಯಾಗಿದೆ.
ಇದನ್ನೂ ಓದಿ: ಮಧ್ಯಪ್ರದೇಶದ ಸುರಂಗದಲ್ಲಿ ಸಿಲುಕಿದ 9 ಕಾರ್ಮಿಕರು: ಭರದಿಂದ ಸಾಗಿದ ರಕ್ಷಣಾ ಕಾರ್ಯ