ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಅಬ್ಬರ ಮತ್ತಷ್ಟು ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 27,409 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಇದೇ ಅವಧಿಯಲ್ಲಿ 347 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 5,09,358ಕ್ಕೆ ಏರಿದೆ. ಪ್ರಸ್ತುತ ದೇಶದಲ್ಲಿ 4,23,127 ಸಕ್ರಿಯ ಪ್ರಕರಣಗಳಿವೆ. ದೈನಂದಿನ ಪಾಸಿಟಿವಿಟಿ ದರ ಶೇ. 2.23 ರಷ್ಟಿದೆ.
ಇದನ್ನೂ ಓದಿ: 12-18 ವರ್ಷ ವಯಸ್ಸಿನವರಿಗೆ 'ಕಾರ್ಬೆವಾಕ್ಸ್' ಲಸಿಕೆ ತುರ್ತು ಬಳಕೆಗೆ ಶಿಫಾರಸು
ನಿನ್ನೆ(ಸೋಮವಾರ) ಒಟ್ಟು 82,817 ರೋಗಿಗಳು ಚೇತರಿಸಿಕೊಂಡಿದ್ದಾರೆ. ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ಚೇತರಿಸಿಕೊಂಡವರ ಸಂಖ್ಯೆ 4,17,60,458 ಆಗಿದೆ.
ದೇಶದ ಕೋವಿಡ್ ವ್ಯಾಕ್ಸಿನೇಷನ್ ವ್ಯಾಪ್ತಿ 173.42 ಕೋಟಿ ದಾಟಿದೆ.