ನವದೆಹಲಿ: ಭಾರತದಲ್ಲಿ ಕೋವಿಡ್ ಸೋಂಕಿತ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,096 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ನಿನ್ನೆ 81 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 5,21,345 ಕ್ಕೆ ಏರಿದೆ. ದೈನಂದಿನ ಪಾಸಿಟಿವಿಟಿ ದರ ಶೇ.0.24 ರಷ್ಟಿದ್ದು, 13,013 ಸಕ್ರಿಯ ಪ್ರಕರಣಗಳಿವೆ. ಪ್ರಸ್ತುತ ಚೇತರಿಕೆಯ ಪ್ರಮಾಣ ಶೇ 98.76 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 1,447 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 4,24,93,773 ಮಂದಿ ಗುಣಮುಖರಾಗಿದ್ದಾರೆ.
-
1,096 new COVID19 cases in India today; Active cases stand at 13,013 pic.twitter.com/zmdGPfGBsE
— ANI (@ANI) April 3, 2022 " class="align-text-top noRightClick twitterSection" data="
">1,096 new COVID19 cases in India today; Active cases stand at 13,013 pic.twitter.com/zmdGPfGBsE
— ANI (@ANI) April 3, 20221,096 new COVID19 cases in India today; Active cases stand at 13,013 pic.twitter.com/zmdGPfGBsE
— ANI (@ANI) April 3, 2022
ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 184.57 ಕೋಟಿಗೂ ಹೆಚ್ಚು ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 4,65,904 ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ.
ಇದನ್ನೂ ಓದಿ:ದೇಶದಲ್ಲಿ 1,335 ಹೊಸ ಕೋವಿಡ್ ಕೇಸ್ ಪತ್ತೆ, 52 ಮಂದಿ ಸಾವು