ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಸೋಂಕಿತರ ಸಂಖ್ಯೆ ನಿಧಾನವಾಗಿ ಏರಿಕೆಯಾಗುತ್ತಿದೆ. ಆದ್ರೆ, ನಿನ್ನೆಗೆ ಹೋಲಿಸಿದ್ರೆ ಇಂದು ಹೊಸ ಸೋಂಕಿತರ ಸಂಖ್ಯೆ ಸ್ವಲ್ಪ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 3,207 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,05,401 ಕ್ಕೆ ಏರಿಕೆಯಾಗಿದೆ.
ಕಳೆದೊಂದು ದಿನದಲ್ಲಿ ದೇಶಾದ್ಯಂತ 29 ಜನರು ಸೋಂಕಿಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 5,24,093 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶಾದ್ಯಂತ 20,403 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಕೆ ದರ ಶೇ. 98.74 % ರಷ್ಟಿದೆ.
ಕಳೆದೊಂದು ದಿನದಲ್ಲಿ 3,410 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ ಒಟ್ಟು 4,25,60,905 ಜನರು ಚೇತರಿಸಿಕೊಂಡಿದ್ದಾರೆ. ದೈನಂದಿನ ಪಾಸಿಟಿವಿಟಿ ದರ ಶೇ. 0.95% ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರ ದರ ಶೇ. 0.82% ರಷ್ಟಿದೆ.
ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನಡಿ ಈವರೆಗೆ 1,90,34,90,396 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ. ಭಾನುವಾರ 13,50,622 ಮಂದಿಗೆ ಲಸಿಕೆ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ 3,36,776 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ 84.10 ಕೋಟಿ ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ.
ಇದನ್ನೂ ಓದಿ: ಮೈಸೂರು-ಗೋವಾ ವಿಮಾನ ರದ್ದು: ಏರ್‌ಪೋರ್ಟ್ ಸಿಬ್ಬಂದಿಗೆ ಪ್ರಯಾಣಿಕರಿಂದ ತರಾಟೆ