ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 2,323 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,31,34,145 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶಾದ್ಯಂತ ಕಳೆದೊಂದು ದಿನದಲ್ಲಿ 25 ಮಂದಿ ಸೋಂಕಿಗೆ ಬಲಿಯಾಗಿದ್ದು, ಇಲ್ಲಿಯವರೆಗೆ ಒಟ್ಟು 5,24,348 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ದೇಶಾದ್ಯಂತ 14,996 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆಗೆ ಹೋಲಿಸಿದ್ರೆ ಕಳೆದ 24 ಗಂಟೆಗಳ ಅವಧಿಯಲ್ಲಿ 48 ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ.
ದೈನಂದಿನ ಪಾಸಿಟಿವಿಟಿ ದರ 0.47 % ರಷ್ಟಿದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ ಶೇ.0.51 ರಷ್ಟಿದೆ. ನಿನ್ನೆ 2,582 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ಒಟ್ಟು 4,25,94,801 ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆಯ ಪ್ರಮಾಣ ಶೇ. 98.75 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕಾ ಅಭಿಯಾನದಡಿ ಈವರೆಗೆ 192.12 ಕೋಟಿ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.
ಇದನ್ನೂ ಓದಿ: ಬೆಳ್ತಂಗಡಿಯಲ್ಲಿ ಅಚ್ಚರಿ.. ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿದೆ ಕೋಳಿ