ನವದೆಹಲಿ: ನಿನ್ನೆ ತಗ್ಗಿದ ಕೊರೊನಾ ಕೇಸ್ಗಳು ಇಂದು 4 ಸಾವಿರದಷ್ಟು ಏರಿಕೆ ಕಂಡಿದ್ದಲ್ಲದೇ, ಸಾವಿನ ಸಂಖ್ಯೆಯೂ ಜಾಸ್ತಿಯಾಗಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 18,313 ಹೊಸ ಕೋವಿಡ್ ಕೇಸ್ಗಳು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 43,938,764 ಕ್ಕೆ ಏರಿಕೆಯಾಗಿದೆ. ಮಂಗಳವಾರ 14,830 ಕೇಸ್ಗಳು ದಾಖಲಾಗಿದ್ದವು ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
-
#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 27, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/iAS0BQPdv4 pic.twitter.com/bNmy32EBL2
">#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 27, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/iAS0BQPdv4 pic.twitter.com/bNmy32EBL2#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) July 27, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/iAS0BQPdv4 pic.twitter.com/bNmy32EBL2
57 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೆ ಮೃತರ ಸಂಖ್ಯೆ 5,26,167ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 20,742 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈವರೆಗೆ 43,267,571 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 1,45,026 ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್-19 ಚೇತರಿಕೆ ದರ ಶೇ. 98.47 ರಷ್ಟಿದ್ದರೆ, ದೈನಂದಿನ ಪಾಸಿಟಿವಿಟಿ ದರ ಶೇ.3.48 ರಷ್ಟಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಅಭಿಯಾನದಡಿ ಈವರೆಗೆ 202.79 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ICMR ಪರೀಕ್ಷೆ: ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜು.26 ರವರೆಗೆ ಕೋವಿಡ್-19ಗಾಗಿ 87,36,11,254 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಮಂಗಳವಾರ 4,25,337 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಮತ್ತೆ ಇ.ಡಿ ಮುಂದೆ ಹಾಜರಾಗಲಿರುವ ಸೋನಿಯಾ