ನವದೆಹಲಿ: ದೇಶದಲ್ಲಿ ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದೊಂದು ದಿನದಲ್ಲಿ 6,168 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. 37 ಮಂದಿ ಸಾವನ್ನಪ್ಪಿದ್ದಾರೆ. 9,685 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಿನ್ನೆ 7,946 ಪ್ರಕರಣಗಳು ವರದಿಯಾಗಿದ್ದು ಇಂದು ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕಡಿಮೆಯಾಗಿದೆ.
ಇಲ್ಲಿಯವರೆಗೆ ಭಾರತದಲ್ಲಿ 5,27,932 ಮಂದಿ ಕೋವಿಡ್ ಮಹಾಮಾರಿಗೆ ಬಲಿಯಾಗಿದ್ದಾರೆ. ಸದ್ಯ ಇರುವ ಸಕ್ರಿಯ ಪ್ರಕರಣಗಳ ಸಂಖ್ಯೆ 59,210. ದೈನಂದಿನ ಪಾಸಿಟಿವಿಟಿ ದರ ಶೇ.1.94 ಇದ್ದು, ವಾರದ ಪಾಸಿಟಿವಿಟಿ ದರ ಶೇ.2.52 ದಾಖಲಾಗಿದೆ.
-
#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 2, 2022 " class="align-text-top noRightClick twitterSection" data="
𝗖𝗢𝗩𝗜𝗗 𝗙𝗟𝗔𝗦𝗛https://t.co/7DTyWq1s9b pic.twitter.com/HLDXCwJImK
">#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 2, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/7DTyWq1s9b pic.twitter.com/HLDXCwJImK#AmritMahotsav#Unite2FightCorona#LargestVaccineDrive
— Ministry of Health (@MoHFW_INDIA) September 2, 2022
𝗖𝗢𝗩𝗜𝗗 𝗙𝗟𝗔𝗦𝗛https://t.co/7DTyWq1s9b pic.twitter.com/HLDXCwJImK
ಈವರೆಗೆ 88.64 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 212.72 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ನಿನ್ನೆ 18 ಲಕ್ಷ ಡೋಸ್ ಲಸಿಕೆ ವಿತರಣೆಯಾಗಿದೆ. ಎಲ್ಲಾ ರಾಜ್ಯಗಳೂ ಸೇರಿ ಸದ್ಯಕ್ಕೆ 5.47 ಕೋಟಿ ಡೋಸ್ ಲಸಿಕೆ ಲಭ್ಯವಿದೆ.
ಇದನ್ನೂ ಓದಿ: ನಡ್ಕೊಂಡು ದೇವಸ್ಥಾನಕ್ಕೆ ಹೋಗ್ತಿದ್ದಾಗ ಹರಿದ ಕಾರು: 6 ಮಂದಿ ಸಾವು, ಹಲವರಿಗೆ ಗಾಯ