ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ7,774 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 3,46,90,510 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯಕ್ಕೆ ದೇಶದಲ್ಲಿ 92,281 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಕಳೆದ 560 ದಿನಗಳಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ನಿನ್ನೆ ಬರೋಬ್ಬರಿ 306 ಮಂದಿ ಸೋಂಕಿಗೆ ಬಲಿಯಾಗಿದ್ದು, ಮೃತರ ಸಂಖ್ಯೆ 4,75,434 ಕ್ಕೆ ಏರಿಕೆಯಾಗಿದೆ.
ಈವರೆಗೆ ದೇಶದಲ್ಲಿ 3,41,22,795 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.36 ರಷ್ಟಿದೆ. ಕಳೆದ 45 ದಿನಗಳಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು 15,000 ಕ್ಕಿಂತ ಕಡಿಮೆ ಕಂಡುಬರುತ್ತಿವೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇಕಡಾ 0.65 ರಷ್ಟಿದೆ.
ಕೋವಿಡ್ ರೂಪಾಂತರಿ ತಳಿ ಆತಂಕದ ಹಿನ್ನೆಲೆ ಲಸಿಕಾ ಅಭಿಯಾನ ಕಾರ್ಯ ಚುರುಕುಗೊಳಿಸಲಾಗಿದೆ. ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 132.93 ಕೋಟಿಗೂ ಅಧಿಕ ಲಸಿಕಾ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್, ಕರ್ನಾಟಕದಲ್ಲಿ ಮತ್ತು ದೆಹಲಿಯಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದು, ಆಯಾ ರಾಜ್ಯ ಸರ್ಕಾರಗಳು ಮುಂಜಾಗ್ರತಾ ಕ್ರಮ ಕೈಗೊಂಡಿವೆ.