ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇತ್ತೀಚೆಗೆ ಕಡಿಮೆ ಸೋಂಕಿತರು ಕಂಡು ಬರುತ್ತಿದ್ದಾರೆ. ಕಳೆದ 24 ಗಂಟೆಗಳಲ್ಲಿ 50,407 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 804 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ 1,36,962 ಮಂದಿ ಕೋವಿಡ್ನಿಂದ ಚೇತರಿಕೆ ಕಂಡಿದ್ದಾರೆ. ಈವರೆಗೆ ಒಟ್ಟು 4,14,68,120 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ಕೋವಿಡ್ ಸೋಂಕಿನಿಂದ ಗುಣಮುಖರಾಗಿರುವವರ ಪ್ರಮಾಣ ಶೇಕಡಾ 97.37ರಷ್ಟಿದೆ ಎಂದು ಆರೋಗ್ಯ ಇಲಾಖೆಯ ಅಂಕಿ - ಅಂಶಗಳು ದೃಢಪಡಿಸಿವೆ. ಈವರೆಗೆ ದೇಶದಲ್ಲಿ ಸುಮಾರು 5,07,981 ಮಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಎಚ್ಐವಿ ಸೋಂಕು ಅನ್ವೇಷಕ, ನೊಬೆಲ್ ಪ್ರಶಸ್ತಿ ವಿಜೇತ ಲುಕ್ ಮಾಂಟಾಗ್ನಿಯರ್ ಇನ್ನಿಲ್ಲ
ದೇಶದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 6,10,443 ಇದ್ದು, ಒಟ್ಟು ಸೋಂಕಿತರಲ್ಲಿ ಶೇಕಡಾ 1.43ರಷ್ಟು ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಹೇಳಿದೆ.
ಟೆಸ್ಟಿಂಗ್ ಮತ್ತು ವ್ಯಾಕ್ಸಿನೇಷನ್: ಈವರೆಗೆ ಸುಮಾರು 74,93,20,579 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ. ಶುಕ್ರವಾರ ಒಂದೇ ದಿನ 14,50,532 ಮಂದಿಗೆ ಸೋಂಕು ಪರೀಕ್ಷೆ ಮಾಡಲಾಗಿದೆ ಎಂದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಾಹಿತಿ ನೀಡಿದೆ. ಈವರೆಗೆ ಸುಮಾರು 1,72,29,47,688 ಕೋಟಿ ಡೋಸ್ ವ್ಯಾಕ್ಸಿನೇಷನ್ ನೀಡಲಾಗಿದೆ. ಶುಕ್ರವಾರ ಒಂದೇ ದಿನದಲ್ಲಿ 46,82,662 ಮಂದಿಗೆ ಲಸಿಕೆ ನೀಡಲಾಗಿದೆ.