ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 12,899 ಹೊಸ ಕೇಸ್ಗಳು ದೃಢಪಟ್ಟಿದ್ದು, 15 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 8,518 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,26,99,363 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 72,474 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,855 ಕ್ಕೆ ಏರಿಕೆಯಾಗಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 43,296,692 ಕ್ಕೆ ತಲುಪಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜೂನ್ 18 ರವರೆಗೆ 85,78,41,663 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಶನಿವಾರ 4,46,387 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ 98.62% ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು 2.89% ರಷ್ಟಿದೆ.