ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 5,443 ಮಂದಿ ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ದೇಶದಲ್ಲೀಗ 46,342 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದಲ್ಲಿ 5,291 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,39,78,271 ಕ್ಕೆ ಏರಿಕೆಯಾಗಿದ್ದು, ಚೇತರಿಕೆಯ ಪ್ರಮಾಣ ಶೇ 98.71 ರಷ್ಟಿದೆ.
ಕಳೆದೊಂದು ದಿನದಲ್ಲಿ 26 ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಕೇರಳದಲ್ಲಿ 12 ಮಂದಿ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 5,28,429 ಕ್ಕೆ ಹೆಚ್ಚಳವಾಗಿದೆ. ಸದ್ಯಕ್ಕೆ ದೈನಂದಿನ ಪಾಸಿಟಿವಿಟಿ ದರವು 1.61 % ಇದ್ದು, ಸಾಪ್ತಾಹಿಕ ಪಾಸಿಟಿವಿಟಿ ದರ 1.73% ಇದೆ. ಸಾವಿನ ಪ್ರಮಾಣವು 1.19 % ಇದೆ.
ಇದನ್ನೂ ಓದಿ: ದೀರ್ಘಕಾಲದ ಕೋವಿಡ್ನಿಂದ ಹೃದಯಾಘಾತ, ಪಾರ್ಶ್ವವಾಯು ಹೆಚ್ಚಳ: ಅಧ್ಯಯನ ವರದಿ
ರಾಷ್ಟ್ರವ್ಯಾಪಿ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ಇದುವರೆಗೆ 217.11 ಕೋಟಿ ಕೋವಿಡ್ ಲಸಿಕಾ ಡೋಸ್ ನೀಡಲಾಗಿದೆ. ಕಳೆದೊಂದು ದಿನದಲ್ಲಿ 15,85,343 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,39,062 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದುವರೆಗೆ ನಡೆಸಲಾದ ಒಟ್ಟು ಪರೀಕ್ಷೆಗಳ ಸಂಖ್ಯೆ 89.27 ಕೋಟಿ ತಲುಪಿದೆ.