ETV Bharat / bharat

ಆರ್ಥಿಕ ಸುಧಾರಣೆಗಳಿಗಾಗಿ ಭಾರತ ಮನಮೋಹನ್ ಸಿಂಗ್ ಅವರಿಗೆ ಋಣಿ: ನಿತಿನ್ ಗಡ್ಕರಿ - ಸಚಿವ ನಿತಿನ್ ಗಡ್ಕರಿ

1991ರಲ್ಲಿ ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವರಾಗಿದ್ದಾಗ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಉದಾರ ಆರ್ಥಿಕತೆಗೆ ನಾಂದಿ ಹಾಡಿ ಭಾರತಕ್ಕೆ ಹೊಸ ದಿಕ್ಕನ್ನು ನೀಡಿದೆ. - ಕೇಂದ್ರ ಸಚಿವ ನಿತಿನ್ ಗಡ್ಕರಿ.

Nitin Gadkari
ನಿತಿನ್ ಗಡ್ಕರಿ
author img

By

Published : Nov 9, 2022, 7:14 AM IST

ನವದೆಹಲಿ: ಆರ್ಥಿಕ ಸುಧಾರಣೆಗಳಿಗಾಗಿ ದೇಶವು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಋಣಿಯಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಮೆಚ್ಚುಗೆ ವ್ಯಕ್ತಪಡಿಸಿದರು.

ಪೋರ್ಟಲ್ 'ಟ್ಯಾಕ್ಸ್‌ ಇಂಡಿಯಾ ಆನ್‌ಲೈನ್' ಆಯೋಜಿಸಿದ್ದ ಟಿಐಒಎಲ್ ಅವಾರ್ಡ್ಸ್ 2022 ಸಮಾರಂಭದಲ್ಲಿ ಮಾತನಾಡಿದ ಅವರು, ಬಡ ಜನರಿಗೆ ಅದರ ಪ್ರಯೋಜನಗಳನ್ನು ಒದಗಿಸುವ ಉದ್ದೇಶದಿಂದ ಭಾರತಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ಒತ್ತಿ ಹೇಳಿದರು.

ಮನಮೋಹನ್ ಸಿಂಗ್ 1991ರಲ್ಲಿ ಹಣಕಾಸು ಸಚಿವರಾಗಿ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತಕ್ಕೆ ಹೊಸ ದಿಕ್ಕನ್ನು ನೀಡಿತು ಮತ್ತು ಅದು ಉದಾರ ಆರ್ಥಿಕತೆಗೆ ನಾಂದಿ ಹಾಡಿದೆ. 1990ರ ದಶಕದ ಮಧ್ಯಭಾಗದಲ್ಲಿ ನಾನು ಮಹಾರಾಷ್ಟ್ರದಲ್ಲಿ ಸಚಿವನಾಗಿದ್ದೆ. ಮನಮೋಹನ್‌ ಸಿಂಗ್‌ ಅವರು ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳಿಂದಾಗಿ, ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣ ಸಂಗ್ರಹಿಸಲು ನನಗೆ ಸಾಧ್ಯವಾಯಿತು. ಉದಾರೀಕರಣ ಹಲವು ಅವಕಾಶಗಳ ಬಾಗಿಲನ್ನು ತೆರೆಯಿತು ಎಂದು ಸ್ಮರಿಸಿದರು.

ಉತ್ತಮ, ಗುಣಮಟ್ಟದ ರಸ್ತೆ ನಿರ್ಮಾಣ ನಮ್ಮ ಧ್ಯೇಯ: ಭಾರತದ ಆರ್ಥಿಕ ಬೆಳವಣಿಗೆಯನ್ನು ಹೇಗೆ ಮತ್ತಷ್ಟು ವೇಗಗೊಳಿಸಬಹುದು ಎಂಬುದರ ಕುರಿತು ಪ್ರತಿಕ್ರಿಯಿಸಿದ ಸಚಿವರು, ಭಾರತಕ್ಕೆ ಹೆಚ್ಚಿನ ಕ್ಯಾಪೆಕ್ಸ್ ಹೂಡಿಕೆಯ ಅಗತ್ಯವಿದೆ. ಹೆದ್ದಾರಿಗಳ ನಿರ್ಮಾಣಕ್ಕಾಗಿ ಎನ್‌ಹೆಚ್‌ಎಐ ಜನಸಾಮಾನ್ಯರಿಂದ ಹಣ ಸಂಗ್ರಹಿಸುತ್ತಿದೆ. ಉತ್ತಮ ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣ ನಮ್ಮ ಧ್ಯೇಯ ಎಂದು ನಿತಿನ್‌ ಗಡ್ಕರಿ ಹೇಳಿದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಸ್ಕೈಬಸ್ ವ್ಯವಸ್ಥೆ, ಮೂರು ತಿಂಗಳಲ್ಲಿ ಅಧ್ಯಯನ ವರದಿಗೆ ಸೂಚನೆ: ನಿತಿನ್ ಗಡ್ಕರಿ..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.