ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಯಲ್ಲಿ 7,219 ಹೊಸ ಕೋವಿಡ್ ಪ್ರಕರಣಗಳು ವರದಿಯಾಗುವುದರೊಂದಿಗೆ, ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4,44,49,726 ಕ್ಕೆ ಏರಿದೆ. ಸಕ್ರಿಯ ಪ್ರಕರಣಗಳು 56,745 ಇದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ-ಅಂಶಗಳು ತಿಳಿಸಿವೆ.
ಕಳೆದ 24 ಗಂಟೆಯಲ್ಲಿ ಕೇರಳದಲ್ಲಿ ಎಂಟು ಮಂದಿ ಮೃತಪಟ್ಟಿದ್ದು, ಕೇರಳ ಸೇರಿದಂತೆ ದೇಶದಲ್ಲಿ 33 ಸೊಂಕಿತರು ಸಾವನ್ನಪ್ಪಿದ್ದಾರೆ. ಈವರೆಗೆ ಒಟ್ಟು 5,27,965 ಜನ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಈಗಿನ ಕೋವಿಡ್ ಪಾಸಿಟಿವಿಟಿ ದರ ಶೇ.0.13 ರಷ್ಟಿದೆ. ಚೇತರಿಕೆ ಪ್ರಮಾಣ ಶೇ.98.68ರಷ್ಟಿದೆ.
ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 4,38,65,016 ಕ್ಕೆ ಏರಿದೆ. ಆದರೆ, ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.19 ರಷ್ಟಿದೆ. ಸಚಿವಾಲಯದ ಪ್ರಕಾರ, ರಾಷ್ಟ್ರವ್ಯಾಪಿ ಕೋವಿಡ್-19 ವ್ಯಾಕ್ಸಿನೇಷನ್ ಡ್ರೈವ್ ಅಡಿಯಲ್ಲಿ ದೇಶದಲ್ಲಿ ಇದುವರೆಗೆ 213.01 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.
ಇದನ್ನೂ ಓದಿ : ವ್ಯಾಕ್ಸಿನ್ ಪಡೆದು ಓಮಿಕ್ರಾನ್ ಸೋಂಕಿಗೊಳಗಾದವರಿಗೆ ಕೋವಿಡ್ನಿಂದ ನಾಲ್ಕು ಪಟ್ಟು ಹೆಚ್ಚು ರಕ್ಷಣೆ