ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ ದಾಖಲೆಯ 8,084 ಹೊಸ ಕೇಸ್ಗಳು ದಾಖಲಾಗಿದ್ದು, 10 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,592 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ದೇಶದಲ್ಲಿ 47,995 ಸಕ್ರಿಯ ಪ್ರಕರಣಗಳಿವೆ. ಈವರೆಗೆ 4,26,57,335 ಜನರು ಕೋವಿಡ್ನಿಂದ ಗುಣಮುಖರಾಗಿದ್ದು, 5,24,771 ಮಂದಿ ಸಾವನ್ನಪ್ಪಿದ್ದಾರೆ.
ಓದಿ: ರಾಜ್ಯದಲ್ಲಿಂದು 463 ಮಂದಿಗೆ ಕೋವಿಡ್ ಸೋಂಕು: ಸಾವು ಶೂನ್ಯ
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಜೂ.11 ರವರೆಗೆ ಕೋವಿಡ್ಗಾಗಿ 85.51 ಕೋಟಿ ಮಾದರಿಗಳನ್ನು ಇದುವರಿಗೆ ಪರೀಕ್ಷಿಸಲಾಗಿದೆ. ಈ ಪೈಕಿ 2,49,418 ಮಾದರಿಗಳನ್ನು ಶನಿವಾರ ಪರೀಕ್ಷಿಸಲಾಗಿದೆ.
ಕರ್ನಾಟಕದಲ್ಲೂ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 463 ಮಂದಿಗೆ ಸೋಂಕು ದೃಢಪಟ್ಟಿದೆ. ಭಾರತದ ಕೋವಿಡ್ ವ್ಯಾಕ್ಸಿನೇಷನ್ ಡ್ರೈವ್ನಲ್ಲಿ 195.19 ಕೋಟಿ ಮೀರಿದೆ.