ನವದೆಹಲಿ : ಕಳೆದ 24 ಗಂಟೆಗಳಲ್ಲಿ 949 ಹೊಸ ಕೋವಿಡ್ ಪ್ರಕರಣ ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ. ದೈನಂದಿನ ಕೋವಿಡ್ ಪಾಸಿಟಿವಿಟಿ ದರವು ಶೇ.0.26ರಷ್ಟಿದೆ. ಈಗ ಸದ್ಯಕ್ಕೆ 11,191 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ.0.03ರಷ್ಟಿದೆ.
ಹೊಸದಾಗಿ 810 ಕೋವಿಡ್ ರೋಗಿಗಳು ಸೋಂಕಿನಿಂದ ಚೇತರಿಸಿಕೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಸಾಂಕ್ರಾಮಿಕ ರೋಗದಿಂದ ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 4,25,07,038ಕ್ಕೆ ಏರಿದೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.98.76ರಷ್ಟಿದೆ. ಆರೋಗ್ಯ ಇಲಾಖೆಯ ಪ್ರಕಾರ ಗುರುವಾರ 3,67,213 ಕೋವಿಡ್ ಮಾದರಿಗಳನ್ನು ಪರೀಕ್ಷಿಸಲಾಗಿದೆ.
ದೇಶದಲ್ಲಿ ಇದುವರೆಗೆ 83.11 ಕೋಟಿ ಸೋಂಕು ಪರೀಕ್ಷೆಗಳನ್ನು ನಡೆಸಲಾಗಿದೆ. ವ್ಯಾಕ್ಸಿನೇಷನ್ ಬಗ್ಗೆ ಹೇಳುವುದಾದರೆ, ಕಳೆದ 24 ಗಂಟೆಗಳಲ್ಲಿ 6,66,660 ಡೋಸ್ ಕೋವಿಡ್ ಲಸಿಕೆಗಳನ್ನು ನೀಡಲಾಗಿದ್ದು, ಇದುವರೆಗೆ 186.30 ಕೋಟಿಗೆ ಸಂಚಿತ ಲಸಿಕೆ ಪ್ರಮಾಣವನ್ನು ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: ತೈಲ ಬೆಲೆ ಬಹುತೇಕ ಯಥಾಸ್ಥಿತಿ.. ಹೀಗಿದೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ