ಲಖನೌ : ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭಾರತದ ವಿರುದ್ಧ 9 ರನ್ ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಬೌಲಿಂಗ್ ಮಾಡಿದ ಭಾರತ ದಕ್ಷಿಣ ಆಫ್ರಿಕಾ ತಂಡವನ್ನು 249 ರನ್ ಗೆ ಕಟ್ಟಿಹಾಕಿತು. ದಕ್ಷಿಣ ಆಫ್ರಿಕಾ ಪರ ಡೇವಿಡ್ ಮಿಲ್ಲರ್ ಮತ್ತು ಹೆನ್ರಿಚ್ ಕ್ಲಾಸೆನ್ ಅವರು ಸಮಯೋಚಿತ ಆಟ ಆಡಿದರು. ಮಿಲ್ಲರ್ 63 ಎಸೆತದಲ್ಲಿ 75 ರನ್ ಮತ್ತು ಕ್ಲಾಸೆನ್ 65 ಎಸೆತದಲ್ಲಿ 74 ರನ್ ಗಳಿಸಿ ಕುಸಿಯುತ್ತಿದ್ದ ರನ್ ಮೊತ್ತವನ್ನು ಹೆಚ್ಚಿಸಿದರು.
40 ಓವರ್ಗಳಲ್ಲಿ ದಕ್ಷಿಣ ಆಫ್ರಿಕಾ 4 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಪರ ಶಾರ್ದುಲ್ ಠಾಕೂರ್ 2 ವಿಕೆಟ್ ಗಳಿಸಿದರು. ರವಿ ಬಿಸ್ನೋಯಿ ಮತ್ತು ಕುಲದೀಪ್ ಯಾದವ್ ತಲಾ ಒಂದು ವಿಕೆಟ್ ಪಡೆದರು.
ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಭಾರತಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಬಳಿಕ ಬಳಿಕ ಬಂದ ರುತುರಾಜ್ ಗಾಯಕ್ವಾಡ್ ಇಶನ್ ಕಿಶನ್ ದೊಡ್ಡ ಇನ್ನಿಂಗ್ಸ್ ಕಟ್ಟುವಲ್ಲಿ ವಿಫಲರಾದರು.
ಬಳಿಕ ಬಂದ ಶ್ರೇಯಸ್ ಅಯ್ಯರ್ ಮತ್ತು ಸಂಜು ಸಾಮ್ಸನ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನಡೆಸಿದರೂ ತಂಡವನ್ನು ಗೆಲುವಿನ ದಡ ಮುಟ್ಟಸುವಲ್ಲಿ ವಿಫಲರಾದರು. ಶ್ರೇಯಸ್ ಅಯ್ಯರ್ 37 ಎಸೆತದಲ್ಲಿ 50 ರನ್ ಗಳಿಸಿದರೆ ಸಾಮ್ಸನ್ 86 ರನ್ ಗಳಿಸಿ ಅಜೇಯರಾಗಿ ಉಳಿದರು.
ಇದನ್ನೂ ಓದಿ : IND VS SA 1ST ODI... ಭಾರತಕ್ಕೆ 250 ರನ್ ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ