ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡುಬರುತ್ತಿದೆ. ಕಳೆದ 24 ಗಂಟೆಗಳಲ್ಲಿ1,054 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,30,35,271 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 29 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,21,685 ಕ್ಕೆ ಏರಿಕೆಯಾಗಿದೆ. ನಿನ್ನೆ 1258 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಕೆ ದರ ಶೇ. 98.76 ರಷ್ಟಿದೆ. ಒಟ್ಟು ಗುಣಮುಖರಾದವರ ಸಂಖ್ಯೆ 4,25,02,454 ಕ್ಕೆ ಏರಿಕೆಯಾಗಿದೆ. ಜತೆಗೆ ದೈನಂದಿನ ಪಾಸಿಟಿವಿಟಿ ದರ 0.14% ಇದೆ.
ದಿನೇ ದಿನೆ ಸೋಂಕಿನ ಪ್ರಕರಣ ಇಳಿಮುಖವಾಗುತ್ತಿದ್ದು, ಸದ್ಯಕ್ಕೆ 11,132 ಸಕ್ರಿಯ ಪ್ರಕರಣಗಳಿವೆ. ಸದ್ಯ ಶೇ. 0.03 ರಷ್ಟು ಸಕ್ರಿಯ ಪ್ರಕರಣಗಳಿವೆ. ವಾರದ ಕೋವಿಡ್ ಪಾಸಿಟಿವಿಟಿ ದರವು ಶೇ. 0.23ರಷ್ಟಿದ್ದರೆ, ದೈನಂದಿನ ಕೋವಿಡ್ ಪಾಸಿಟಿವಿಟಿ ದರ ಶೇ. 0.25 ರಷ್ಟಿದೆ. ಮತ್ತೊಂದೆಡೆ, ದೇಶದಲ್ಲಿ ಲಸಿಕೆ ನೀಡುವ ಕಾರ್ಯ ಮುಂದುವರೆದಿದೆ. ರಾಷ್ಟ್ರವ್ಯಾಪಿ ಇದುವರೆಗೆ ಒಟ್ಟು 1,85,70,71,655 ಲಸಿಕಾ ಡೋಸ್ ನೀಡಲಾಗಿದೆ.
ಇದನ್ನೂ ಓದಿ: ದೇಶದ ಜನತೆಗೆ ರಾಮನವಮಿ ಶುಭಾಶಯ ಕೋರಿದ ಪ್ರಧಾನಿ ಮೋದಿ