ನವದೆಹಲಿ: ಕಳೆದ 24 ಗಂಟೆಗಳಲ್ಲಿ 58,077 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 42,536,137ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದೊಂದು ದಿನದಲ್ಲಿ 657 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಸಹ 6,97,802ಕ್ಕೆ ಇಳಿದಿದೆ. ದೈನಂದಿನ ಕೋವಿಡ್ ಪಾಸಿಟಿವಿಟಿ ರೇಟ್ ಶೇ 3.89 ಇದೆ. ಸಾಪ್ತಾಹಿಕ ಪಾಸಿಟಿವಿಟಿ ದರವು ಶೇ5.76 ದಾಖಲಾಗಿದೆ ಎಂದು ಆರೋಗ್ಯಇಲಾಖೆ ತಿಳಿಸಿದೆ.
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮಹಾನಿರ್ದೇಶಕ ಡಾ.ಬಲರಾಮ್ ಭಾರ್ಗವ ಮಾತನಾಡಿ, ರಾಷ್ಟ್ರವ್ಯಾಪಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಅನ್ನು 96 ಪ್ರತಿಶತ ನೀಡಲಾಗಿದೆ. ಜೊತೆಗೆ ಭಾರತವು ಲಸಿಕೆ ಸೂಪರ್-ಪವರ್ ಆಗುವತ್ತ ಸಾಗುತ್ತಿದೆ ಎಂದು ಹೇಳಿದ್ದಾರೆ.
ಗುರುವಾರ ಪಂಜಾಬ್‌ನಲ್ಲಿ 19 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಮತ್ತು 583 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 7,54,367 ಕ್ಕೆ ಏರಿಕೆಯಾಗಿದೆ.