ನವದೆಹಲಿ: ದೇಶಾದ್ಯಂತ ಮತ್ತೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಶನಿವಾರ 27,553 ಮಂದಿ ಹೊಸ ಕೋವಿಡ್ ಸೋಂಕಿತರು ಪತ್ತೆಯಾಗಿದ್ದು, 284 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸದ್ಯಕ್ಕೆ ಒಟ್ಟು 1,22,801 ಸಕ್ರಿಯ ಪ್ರಕರಣಗಳಿವೆ. ನಿನ್ನೆ 9,249 ಮಂದಿ ಚೇತರಿಸಿಕೊಂಡಿದ್ದು, ಈವರೆಗೆ ದೇಶದಲ್ಲಿ 3,42,84,561 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ದರ ಶೇ. 98.27 ರಷ್ಟಿದೆ.
ಕಳೆದೊಂದು ದಿನದಲ್ಲಿ 284 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 4,81,770. ಕಳೆದ ಒಂದೂವರೆ ತಿಂಗಳಿನಿಂದ ಹೊಸ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿತ್ತು. ಇದೀಗ ಮತ್ತೆ ಏರತೊಡಗಿದೆ. ನಿನ್ನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ - 2,716 ಹಾಗೂ ಮಹಾರಾಷ್ಟ್ರ -9,170, ಕೇರಳ- 2,435, ತಮಿಳುನಾಡು- 1,489, ಪಶ್ಚಿಮ ಬಂಗಾಳ- 4,512 ಹೊಸ ಸೋಂಕಿತ ಪ್ರಕರಣಗಳು ದೃಢಪಟ್ಟಿವೆ.
ಡಿಸೆಂಬರ್ 2 ರಂದು ಕರ್ನಾಟಕದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಭಾರತದಲ್ಲಿ ಸದ್ಯಕ್ಕೆ ಒಟ್ಟು 1,525 ಒಮಿಕ್ರಾನ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಒಟ್ಟು 560 ಮಂದಿ ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.