ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 10,423 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು, ಹಿಂದಿನ 259 ದಿನಗಳಿಗೆ ಹೋಲಿಸಿದ್ರೆ ಹೊಸ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಸದ್ಯ ಭಾರತದಲ್ಲಿ 1,53,776 ಸಕ್ರಿಯ ಪ್ರಕರಣಗಳಿದ್ದು, ಕಳೆದ 250 ದಿನಗಳಿಗೆ ಹೋಲಿಸಿದರೆ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. 443 ಮಂದಿ ನಿನ್ನೆ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 4,58,880 ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ನಿನ್ನೆ 15,021 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ಚೇತರಿಕೆ ಪ್ರಮಾಣ 98.21% ಇದೆ. ಜೊತೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 3,36,83,581 ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಲಸಿಕಾ ನೀಡಿಕೆ ನಿರಂತರವಾಗಿ ನಡೆಯುತ್ತಿದ್ದು, ಈವರೆಗೆ ಒಟ್ಟು 1,06,85,71,879 ಲಸಿಕಾ ಡೋಸ್ ನೀಡಲಾಗಿದೆ. ಜೊತೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 3,42,96,237 ಕ್ಕೆ ಏರಿಕೆಯಾಗಿದೆ.