ನವದೆಹಲಿ: ಕೇಂದ್ರ ಆರೋಗ್ಯ ಇಲಾಖೆ ನೀಡಿದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 13,216 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೂ ಮುಂಚಿನ 24 ಗಂಟೆಗಳಲ್ಲಿ ಪತ್ತೆಯಾಗಿದ್ದ 12,847 ಪ್ರಕರಣಗಳಿಗೆ ಹೋಲಿಸಿದರೆ ಹೊಸ ಪ್ರಕರಣಗಳ ಸಂಖ್ಯೆ 400ಕ್ಕೂ ಹೆಚ್ಚು ಕಂಡು ಬಂದಿದೆ.
ಕಳೆದ 24 ಗಂಟೆಗಳಲ್ಲಿ ಕೋವಿಡ್ನಿಂದ 23 ಜನ ಮೃತಪಟ್ಟಿದ್ದು, ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,24,840 ಕ್ಕೆ ಏರಿಕೆಯಾಗಿದೆ. ಒಟ್ಟಾರೆ ಸಕ್ರಿಯ ಪ್ರಕರಣಗಳ ಸಂಖ್ಯೆ 68,108 ಇದ್ದು, ಇದು ದೇಶದ ಒಟ್ಟಾರೆ ಪಾಸಿಟಿವ್ ಪ್ರಕರಣಗಳ ಶೇ 0.16 ರಷ್ಟಿದೆ.
ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಕೋವಿಡ್ ಟೆಸ್ಟ್: ಬೆಂಗಳೂರಿಗೊಂದು, ಮೈಸೂರಿಗೊಂದು ರೂಲ್ಸ್
ಕಳೆದ 24 ಗಂಟೆಗಳಲ್ಲಿ 8,148 ರೋಗಿಗಳು ಕೋವಿಡ್ನಿಂದ ಚೇತರಿಸಿಕೊಂಡಿದ್ದು, ಇಲ್ಲಿಯವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 4,26,90,845 ಆಗಿದೆ. ದೇಶದಲ್ಲಿ ಕೋವಿಡ್ನಿಂದ ಗುಣಮುಖರಾಗುವವರ ಪ್ರಮಾಣ ಶೇ 98.63 ರಷ್ಟಿದೆ. ಪ್ರತಿದಿನದ ಪಾಸಿಟಿವಿಟಿ ರೇಟ್ ತುಸು ಏರಿಕೆಯಾಗಿ ಶೇ 2.73 ರಷ್ಟಿದೆ.
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 4,84,924 ಕೋವಿಡ್ ಟೆಸ್ಟ್ಗಳನ್ನು ಮಾಡಲಾಗಿದೆ. ಇಲ್ಲಿಯವರೆಗೆ ದೇಶದಲ್ಲಿ ಒಟ್ಟಾರೆ 85.73 ಕೋಟಿ ಕೋವಿಡ್ ಟೆಸ್ಟ್ಗಳನ್ನು ಮಾಡಲಾಗಿದೆ. ಶುಕ್ರವಾರದ ಮುಂಜಾನೆ ವೇಳೆಗೆ ದೇಶದಲ್ಲಿ ಒಟ್ಟಾರೆ 196 ಕೋಟಿ ಕೋವಿಡ್ ಲಸಿಕಾ ಡೋಸ್ಗಳನ್ನು ನೀಡಲಾಗಿದೆ.