ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 13,596 ಮಂದಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 230 ದಿನಗಳ ಬಳಿಕ ಇಷ್ಟು ಕಡಿಮೆ ಕೇಸ್ಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಭಾನುವಾರ 166 ಮಂದಿ ಸೋಂಕಿಗೆ ಬಲಿಯಾಗಿದ್ದು, ಕೋವಿಡ್ ಮೃತರ ಸಂಖ್ಯೆ 4,52,290 ಹೆಚ್ಚಳವಾಗಿದೆ. ಇಲ್ಲಿಯವರೆಗೆ ಒಟ್ಟು 3,40,81,315 ಜನರಿಗೆ ವೈರಸ್ ಅಂಟಿದ್ದು, ಇವರಲ್ಲಿ ಶೇ.98.12ರಷ್ಟು ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 221 ದಿನಗಳ ಬಳಿಕ ಆ್ಯಕ್ಟಿವ್ ಕೇಸ್ ಪ್ರಮಾಣ ಶೇ.0.56 ಕ್ಕೆ ಇಳಿಕೆಯಾಗಿದ್ದು, ಪ್ರಸ್ತುತ 1,89,694 ಪ್ರಕರಣಗಳು ಸಕ್ರಿಯವಾಗಿದೆ.
ಇದನ್ನೂ ಓದಿ: ಕೋವಿಡ್ ವ್ಯಾಕ್ಸಿನ್ ಹಾಕಿಸಿಕೊಳ್ಳಿ ಟಿವಿ, ಮೊಬೈಲ್ ಗೆಲ್ಲಿ!
97.79 ಕೋಟಿ ಡೋಸ್ ವ್ಯಾಕ್ಸಿನೇಷನ್
ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಈವರೆಗೆ 97,79,47,783 ಡೋಸ್ ವ್ಯಾಕ್ಸಿನ್ ನೀಡಲಾಗಿದೆ. ಕರ್ನಾಟಕದಲ್ಲೇ 6,08,92,368 ಡೋಸ್ ವ್ಯಾಕ್ಸಿನ್ ಹಾಕಲಾಗಿದ್ದು, ಶೇ.38ರಷ್ಟು ಜನರು ಎರಡೂ ಡೋಸ್ ಪಡೆದಿದ್ದಾರೆ.