ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 13,742 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,10,30,176ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
104 ಜನ ಸೋಂಕಿತರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,56,567 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 14,037 ಜನ ಕೋವಿಡ್-19ನಿಂದ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 1,07,26,702ಕ್ಕೆ ಏರಿದೆ.
ಇದನ್ನು ಓದಿ: ಪಾಲ್ಘರ್ ಸಾಧುಗಳ ಹತ್ಯೆ ಕೇಸ್: ಇಂದು ಸುಪ್ರೀಂನಲ್ಲಿ ವಿಚಾರಣೆ
1,46,907 ಸಕ್ರಿಯ ಪ್ರಕರಣಗಳಿದ್ದು, ಇಲ್ಲಿಯವರೆಗೆ 1,21,65,598 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ.