ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 14,148 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ ದೇಶದಲ್ಲಿ ಮಹಾಮಾರಿ ಸೋಂಕಿಗೆ 302 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವನ್ನಪ್ಪಿರುವವರ ಸಂಖ್ಯೆ 5,12,924 ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ 1,48,359 ಸಕ್ರಿಯ ಪ್ರಕರಣಗಳಿವೆ.
ನಿನ್ನೆ 30,009 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದು, ಈ ಮೂಲಕ ಒಟ್ಟು ಗುಣಮುಖರಾದವರ ಸಂಖ್ಯೆ 4,22,19,896 ಕ್ಕೆ ಏರಿಕೆಯಾಗಿದೆ. ಜೊತೆಗೆ ಪಾಸಿಟಿವಿಟಿ ದರ 1.22% ಇದೆ.
ವ್ಯಾಕ್ಸಿನೇಷನ್ ವಿವರ: ಈವರೆಗೆ ದೇಶದಲ್ಲಿ ಸುಮಾರು 1,76,52,31,385 ಕೋಟಿ ಡೋಸ್ ವ್ಯಾಕ್ಸಿನ್ ನೀಡಲಾಗಿದ್ದು, ಕಳೆದ ದಿನ 30,49,988 ಡೋಸ್ ಲಸಿಕೆ ನೀಡಲಾಗಿದೆ.