ನವದೆಹಲಿ: ಎರಡನೇ ಕೋವಿಡ್ ಅಲೆಯಲ್ಲಿ ದಿನದಿನಕ್ಕೂ ದೇಶದಲ್ಲಿ ದಾಖಲೆಯ ಮಟ್ಟದಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗುತ್ತಿವೆ. ಶನಿವಾರ ಒಂದೇ ದಿನ ಬರೋಬ್ಬರಿ 1,52,879 ಸೋಂಕಿತರು ಪತ್ತೆಯಾಗಿದ್ದು, 839 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲೀಗ ಕೊರೊನಾ ಕೇಸ್ಗಳ ಸಂಖ್ಯೆ 1,33,58,805 ಹಾಗೂ ಸಾವಿನ ಸಂಖ್ಯೆ 1,69,275ಕ್ಕೆ ಏರಿಕೆಯಾಗಿದೆ. ಹೊಸ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದ್ದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಕೂಡ 11,08,087ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 90,584 ರೋಗಿಗಳು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ಸೋಂಕಿತರ ಪೈಕಿ 1,20,81,443 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
10.15 ಕೋಟಿ ಮಂದಿಗೆ ವ್ಯಾಕ್ಸಿನ್
ಇತ್ತ ಕೊರೊನಾ ವ್ಯಾಕ್ಸಿನೇಷನ್ ಅಭಿಯಾನ ಕೂಡ ಯಶಸ್ವಿಯಾಗಿ ನಡೆಯುತ್ತಿದ್ದು, ಜನವರಿ 16ರಿಂದ ಈವರೆಗೆ ಇಲ್ಲಿಯವರೆಗೆ 10,15,95,147 ಮಂದಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
25.66 ಕೋಟಿ ಜನರಿಗೆ ಟೆಸ್ಟ್
ಏಪ್ರಿಲ್ 10ರ ವರೆಗೆ 25,66,26,850 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ನಿನ್ನೆ ಒಂದೇ ದಿನ 14,12,047 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಿಳಿಸಿದೆ.