ನವದೆಹಲಿ: ಕಳೆದ 30 ದಿನಗಳಿಂದ ದೇಶದಲ್ಲಿ ಪ್ರತಿನಿತ್ಯ ವರದಿಯಾಗುತ್ತಿರುವ ಹೊಸ ಕೋವಿಡ್ ಕೇಸ್ಗಳ ಸಂಖ್ಯೆ 30 ಸಾವಿರ ಗಡಿಯಿಂದ ಕೆಳಗಿಳಿದಿದೆ. ಕಳೆದ 119 ದಿನಗಳಿಂದ 50 ಸಾವಿರ ಗಡಿಯಿಂದ ಕೆಳಗಿದೆ. ನಿನ್ನೆ ಹೊಸದಾಗಿ 15,906 ಸೋಂಕಿತರು ಪತ್ತೆಯಾಗಿದ್ದಾರೆ.
ಆದರೆ ಸಾವಿನ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 561 ಮಂದಿ ಮೃತಪಟ್ಟಿದ್ದಾರೆ. ದೇಶದಲ್ಲಿ ಈವರೆಗೆ ಒಟ್ಟು 3,41,75,468 ಪ್ರಕರಣಗಳು ವರದಿಯಾಗಿವೆ. ಈ ಪೈಕಿ 3,35,48,605 ಮಂದಿ ವೈರಸ್ನಿಂದ ಚೇತರಿಸಿಕೊಂಡಿದ್ದಾರೆ.
ಈ ಮೂಲಕ ಗುಣಮುಖರ ಪ್ರಮಾಣ ಶೇ.96.17ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣ ಪ್ರಮಾಣ ಶೇ.0.51ಕ್ಕೆ ಇಳಿಕೆಯಾಗಿದೆ. ಸದ್ಯ 1,72,594 ಕೇಸ್ಗಳು ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: World Polio Day 2021: ಪೋಲಿಯೊ ಶಾಶ್ವತ ನಿರ್ಮೂಲನೆಯ ಗುರಿ
102.10 ಕೋಟಿ ಡೋಸ್ ವ್ಯಾಕ್ಸಿನೇಷನ್
ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕಾ ಅಭಿಯಾನ ಆರಂಭಿಸಲಾಗಿದ್ದು, ಅಕ್ಟೋಬರ್ 21ಕ್ಕೆ ನೂರು ಕೋಟಿ ಡೋಸ್ ಲಸಿಕೆ ವಿತರಿಸಿ ಭಾರತ ಇತಿಹಾಸ ಬರೆದಿತ್ತು. ಇಲ್ಲಿಯವರೆಗೂ 102.10 ಕೋಟಿಗೂ ಅಧಿಕ ಡೋಸ್ ವ್ಯಾಕ್ಸಿನ್ ಅನ್ನು ಜನರು ಪಡೆದಿದ್ದಾರೆ.