ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಮಹಾಮಾರಿ ಕೋವಿಡ್ ಸೋಂಕಿತರ ಪ್ರಕರಣಗಳಲ್ಲಿ ಇಂದು ಕೊಂಚ ಇಳಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 15,940 ಹೊಸ ಕೇಸ್ಗಳು ದೃಢಪಟ್ಟಿದ್ದು, 20 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದೊಂದು ದಿನದಲ್ಲಿ 12,425 ಜನರು ಕೋವಿಡ್ನಿಂದ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಒಟ್ಟು 4,27,61,481 ಜನರು ಗುಣಮುಖರಾಗಿದ್ದಾರೆ. ಸದ್ಯಕ್ಕೆ ದೇಶದಲ್ಲಿ 91,779 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸಾವಿನ ಸಂಖ್ಯೆ 5,24,974 ಕ್ಕೆ ಏರಿಕೆಯಾಗಿದೆ.
ಓದಿ: ದೇಶದಲ್ಲಿ ಏರುತ್ತಿರುವ ಕೊರೊನಾ ಸಂಖ್ಯೆ.. ಇಂದಿನ ಮಾಹಿತಿ ಇಲ್ಲಿದೆ..
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಪ್ರಕಾರ, ಇಲ್ಲಿಯವರೆಗೆ 86.06 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಶುಕ್ರವಾರ 3,63,103 ಮಂದಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ಪ್ರಸ್ತುತ ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇ 98.58 ರಷ್ಟಿದ್ದು, ದೈನಂದಿನ ಪಾಸಿಟಿವಿಟಿ ದರವು ಶೇ 4.39 ರಷ್ಟಿದೆ. ಇಲ್ಲಿಯವರೆಗೆ 196.94 ಕೋಟಿ ಕೊರೊನಾ ಡೋಸ್ಗಳನ್ನು ನೀಡಲಾಗಿದೆ.