ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 16,156 ಹೊಸ ಕೋವಿಡ್-19 (COVID-19) ಪ್ರಕರಣಗಳು ದೃಢಪಟ್ಟಿದ್ದು ಬರೋಬ್ಬರಿ 733 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಸದ್ಯಕ್ಕೆ ಭಾರತದಲ್ಲಿ 1,60,989 ಸಕ್ರಿಯ ಪ್ರಕರಣಗಳಿದ್ದು, ನಿನ್ನೆ 17,095 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ ಚೇತರಿಕೆ ಪ್ರಮಾಣ ಶೇ 98.20 ಇದೆ. ಜೊತೆಗೆ ಒಟ್ಟು ಗುಣಮುಖರಾದವರ ಸಂಖ್ಯೆ 3,36,14,434 ಕ್ಕೆ ಏರಿಕೆಯಾಗಿದೆ.
ಇನ್ನು ದೇಶಾದ್ಯಂತ ಲಸಿಕಾ ಅಭಿಯಾನ ನಿರಂತರವಾಗಿ ನಡೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ 49,09,254 ಮಂದಿಗೆ ಕೋವಿಡ್ ಲಸಿಕಾ ಡೋಸ್ ನೀಡಲಾಗಿದೆ.